ಕೋಲಾರ: ಬೈಕ್ ಗೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಸಾರಿಗೆ ನೌಕರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರೆಡ್ಡಪ್ಪ (58) ಸಾವನ್ನಪ್ಪಿರುವ ವ್ಯಕ್ತಿ. ಗಾಳಿ, ಮಳೆಯಿಂದಾಗಿ ವಿದ್ಯುತ್ ಕಂಬವೊಂದು ರಸ್ತೆಯಲ್ಲಿ ಉರುಳಿ ಬಿದ್ದಿದೆ. ಆದರೆ, ಇದನ್ನು ಗಮನಿಸದ ಸಾರಿಗೆ ನೌಕರ ಬೈಕ್ ಚಲಾಯಿಸಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ತೋಟಕ್ಕೆ ತೆರಳುವ ವೇಳೆ ಬೈಕ್ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರೆಡ್ಡಪ್ಪ ಮುಳಬಾಗಿಲು ಕೆಎಸ್ಆರ್ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.