ಚಿಕ್ಕಬಳ್ಳಾಪುರ: ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಹೊನ್ನಪ್ಪನಹಳ್ಳಿ ಗ್ರಾಮದ ಒಬಳೇಷ್ (45) ಹಾಗೂ ಮಂಚೇನಹಳ್ಳಿಯ ಮೆಕ್ಯಾನಿಕ್ ಅಜ್ಗರ್ (35) ಸಾವನ್ನಪ್ಪಿದ್ದಾರೆ. ಎರಡು ಬೈಕ್ ಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.
ಅಲ್ಲದೇ, ಒಂದು ಬೈಕ್ ನಲ್ಲಿದ್ದ ಹಿಂಬದಿ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಒರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.