ದಾವಣಗೆರೆ: ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹೊನ್ನಾಳಿಯಲ್ಲಿ ನಡೆದಿದೆ.
ತೆಪ್ಪದಲ್ಲಿದ್ದ ತಿಪ್ಪೇಶ್ (19), ಮುಕ್ತಿಯಾರ್ (25) ಮೃತ ಯುವಕರು.
ತೆಪ್ಪದಲ್ಲಿ ಒಟ್ಟು ನಾಲ್ವರು ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದ್ದು, ಇಬ್ಬರು ಈಜಿ ದಡ ಸೇರಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರುಪಾಲದ ಯುವಕರ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಸತತ 3 ಗಂಟೆಯಿಂದ ಹುಡುಕಾಟ ನಡೆಸುತ್ತಿದ್ದಾರೆ.
ಅಕ್ರಮವಾಗಿ ಮರಳು ತೆಗೆಯುತ್ತಿದ್ದಾಗ ತೆಪ್ಪ ಮುಗುಚಿ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇನ್ನೂ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹೊನ್ನಾಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.