ತುಮಕೂರು: ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಕಚೇರಿಗೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
ಬಿಜೆಪಿ ಶಾಸಕರಾದ ಸುರೇಶ್ ಗೌಡ, ಜ್ಯೋತಿಗಣೇಶ್, ಎಂ ಎಲ್ ಸಿ ಚಿದಾನಂದ್ ಹಾಗೂ ಬಿಜೆಪಿ ಎಸ್ಟಿ ಮೋರ್ಚಾ ಜ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ನೂರಾರು ಕಾರ್ಯಕರ್ತರು ಇದ್ದರು. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ತಪ್ಪಿತಸ್ಥ ಭ್ರಷ್ಟ ಅಧಿಕಾರಿಗಳನ್ನು ಬಂಧಿಸಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ತುಮಕೂರು ವಾಲ್ಮೀಕಿ ಅಭಿವೃದ್ದಿ ನಿಗಮ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. 12 ಜನ ಫಲಾನುಭವಿಗಳ ಹೆಸರಿನಲ್ಲಿ 24 ಲಕ್ಷ ಸಬ್ಸಿಡಿ ಹಾಗೂ ಸಾಲದ ಹಣವನ್ನು ಅಧಿಕಾರಿಗಳು ಲಪಟಾಯಿಸಿದ್ದಾರೆ. ಶಿರಾ ಹಾಗೂ ಪಾವಗಡ ತಾಲ್ಲೂಕಿನ ತಲಾ 6 ಜನ ಫಲಾನುಭವಿಗಳಿಗೆ ವಂಚನೆ ಮಾಡಲಾಗಿದೆ. ಅಂದಿನ ಜಿಲ್ಲಾ ವ್ಯವಸ್ಥಾಪಕ ಶ್ರೀಧರ್ ಹಾಗೂ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಇಲಾಖೆಗೆ ವಂಚಿಸಿದ್ದಾರೆ.
2023 ರಲ್ಲಿ ಅಂದಿನ ಕೇಂದ್ರ ಸಚಿವ ನಾರಾಯಣ ಸ್ವಾಮಿ ಶಿಫಾರಸ್ಸು ಪತ್ರ ಬಳಸಿ ಅನುಧಾನ ಮಂಜೂರು ಮಾಡಿದ್ದರು. 19-20ರ ಸಾಲಿನಲ್ಲಿ 12 ಜನರ ಹೆಸರಿನಲ್ಲಿ ಫಲಾನುಭವಿಗಳ ನಕಲಿ ಸಹಿ ಮಾಡಿ ಅರ್ಜಿ ಸಲ್ಲಿಕೆ ಮಾಡಿ ನಕಲಿ ಖಾತೆ ತೆರೆದು ಹಣ ಲೂಟಿ ಮಾಡಿದ್ದಾರೆ. ಹೀಗಾಗಿ TDO ನಾಗೇಂದ್ರ ಹಾಗೂ DM ಶ್ರಿಧರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಲಾಯಿತು.