ರಾಮನಗರ : ಸಮಗ್ರ ಚುನಾವಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ವಾಟಾಳ್ ನಾಗರಾಜ್ ಮಾತನಾಡಿ, ಮತಕಳ್ಳತನದ ವಿರುದ್ದ ರಾಹುಲ್ ಗಾಂಧಿಯವರು ನಾಳೆ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಏನು ಪ್ರಯೋಜನವಿಲ್ಲ. ಚುನಾವಣೆಯ ವ್ಯವಸ್ಥೆ ಬದಲಾವಣೆ ಆಗಬೇಕು. ವ್ಯವಸ್ಥೆ ಬದಲಾವಣೆ ಆಗದಿದ್ದರೇ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಇಡೀ ದೇಶದಾದ್ಯಂತ ಆಕ್ರಮ ಮತಗಳ ಮಾರಾಟ ನಡೆಯುತ್ತಿದ್ದು, ಹಣವಂತರು ಮಾತ್ರ ಚುನಾವಣೆಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಲೆ ಪಾತಕರು, ಲೂಟಿಕೋರರು ಪಾರ್ಲಿಮೆಂಟ್ ಗೆ ಬರುತ್ತಿದ್ದಾರೆ. ಚುನಾವಣೆಯಲ್ಲಿ ಸರಾಸರಿ ಪ್ರತಿಕ್ಷೇತ್ರಕ್ಕೆ 25 ಕೋಟಿ ಖರ್ಚು ಆಗುತ್ತಿದ್ದು, ರಾಜ್ಯದಲ್ಲಿ ಒಂದು ಚುನಾವಣೆಗೆ 5.625 ಕೋಟಿ ಖರ್ಚು ಆಗುತ್ತಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗ ಬದುಕಿದೀಯಾ? ಚುನಾವಣಾ ಆಯೋಗಕ್ಕೆ ಬೆಂಕಿ ಹಾಕಬೇಕು ಹೀಗೆ ಆದರೆ ಜನ ದಂಗೆ ಹೇಳುತ್ತಾರೆ. ಚುನಾವಣಾ ವ್ಯವಸ್ಥೆ ಬದಲಾವಣೆ ಆಗಬೇಕು ಚುನಾವಣೆ ಪ್ರಮಾಣಿಕವಾಗಿ ಆಗಬೇಕು ಎಂದರು.