ಚಾಮರಾಜನಗರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 40 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಚಾಮರಾಜನಗರದ ಜಾಲಹಳ್ಳಿಹುಂಡಿ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಡಿತರದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ, ಅಕ್ರಮವಾಗಿ ದಾಸ್ತಾನು ಮಾಡುತ್ತಿದ್ದ ದಂಧೆಕೋರರಿಂದ ಪೊಲೀಸರು ಅಕ್ಕಿ ವಶಕ್ಕೆ ಪಡೆದಿದ್ದಾರೆ.
ತಲಾ 50 ಕೆ ಜಿ ತೂಕದ 80 ಚೀಲ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, ಟೆಂಪೋವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.