ಬೆಂಗಳೂರು: ನೀವೇನಾದರೂ ಚಿಕ್ಕಮಗಳೂರಿನವರಾಗಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಮುಗಿಸಿದ್ದೀರಾ? ನಿಮ್ಮ ಜಿಲ್ಲೆ, ತಾಲೂಕುಗಳಲ್ಲೇ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಚಿಕ್ಕಮಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಸಹಾಯಕಿಯರು ಹಾಗೂ ಶಿಕ್ಷಕಿಯರ ಹುದ್ದೆಗಳ ನೇಮಕಾತಿಗಾಗಿ (WCD Chikkamagaluru Recruitment 2025) ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಚಿಕ್ಕಮಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಒಟ್ಟು ಹುದ್ದೆಗಳು: 322
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 4
ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ, ತರೀಕೆರೆ ತಾಲೂಕಿನಲ್ಲಿರುವ ಅಂಗನವಾಡಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 19 ರಿಂದ 35 ವರ್ಷದೊಳಗಿನ ಹೆಣ್ಣುಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
“ಅರ್ಜಿ ಸಲ್ಲಿಸುವುದು ಹೇಗೆ?”
ಅಭ್ಯರ್ಥಿಗಳು ಮೊದಲಿಗೆ karnemakaone.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು
ಅಂಗನವಾಡಿ ಸಹಾಯಕಿಯರು ಹಾಗೂ ಶಿಕ್ಷಕಿಯರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಓದಿಕೊಂಡು ಎಲ್ಲ ದಾಖಲೆ ಸಿದ್ಧಪಡಿಸಬೇಕು
ಆನ್‌ಲೈನ್ ಅರ್ಜಿಯನ್ನು ಯಾವುದೇ ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬೇಕು



















