ನಾವು ಯಾರ ವಿರುದ್ಧವೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದಲ್ಲಿ ಹೇಳಿದ್ದಾರೆ.
ಅಮೆರಿಕದಲ್ಲಿ ನಡೆಯುತ್ತಿರುವ ಕ್ವಾಡ್ ಶೃಂಗಸಭೆ 2024ರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ವಾಡ್ ದೇಶಗಳು ಒಂದಾಗಿ ಜಗತ್ತಿನ ಒಳಿತಿಗಾಗಿ ಕೆಲಸ ಮಾಡಬೇಕಿದೆ. ಪ್ರಾದೇಶಿಕ ಸಮಗ್ರತೆಗೆ ಗೌರವ ಹಾಗೂ ಶಾಂತಿ ಪರಿಹಾರಕ್ಕಾಗಿ ಎಲ್ಲಾ ಸಮಸ್ಯೆಗಳ ಶಾಂತಿಯುತ ಪರಿಹಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ, ಭದ್ರತೆ, ನಿರ್ಣಾಯಕ ಉದಯೋನ್ಮುಖ ತಂತ್ರಜ್ಞಾನಗಳು, ಹವಾಮಾನ ಬದಲಾವಣೆ ಹಾಗೂ ಸಾಮರ್ಥ್ಯ ನಿರ್ಮಾಣದಂತಹ ಕ್ಷೇತ್ರಗಳಲ್ಲಿ ಕ್ವಾಡ್ ದೇಶಗಳು ಉಪಕ್ರಮಗಳನ್ನು ತೆಗೆದುಕೊಂಡಿವೆ ಎಂದು ಹೇಳಿದ್ದಾರೆ.
ಅಮೆರಿಕದ ಡೆಲವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿಸಿದ್ದರು. ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.