ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ (IPS) ಅಧಿಕಾರಿಗಳ ಅಮಾನತು ಆದೇಶ ರದ್ದು ಮಾಡಿ ಸಿಎಟಿ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಆದೇಶದ ಹೊರಡಿಸಿರುವ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದಿದ್ದಾರೆ. ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಶಾಸಕ ಬಿ.ಆರ್.ಪಾಟೀಲ್ (BR Patil) ಅವರ ಸಿದ್ದರಾಮಯ್ಯನವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್‌ರವರು ಈ ರೀತಿ ಹೇಳಿಕೆ ನೀಡಿರಬಹುದು ಎಂದಿದ್ದಾರೆ.