ಚಿಕ್ಕಮಗಳೂರಲ್ಲಿ ಮಳೆ ಆರ್ಭಟ ಸದ್ಯಕ್ಕೆ ಶಾಂತವಾಗುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದ ಮೂರು ದಿನಗಳಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರ್ಷಧಾರೆ ಜನಜೀವನವನ್ನು ಅಯೋಮಯ ಮಾಡಿದೆ.
ಜೋರಾದ ಗಾಳಿಯೊಟ್ಟಿಗೆ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಭಾಗದಲ್ಲಿ ಭಾರೀ ಬಿರುಗಾಳಿ ಸಹಿತ ವರ್ಷಧಾರೆ ಆಗುತ್ತಿದೆ.