ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಬೆಂಗಳೂರಿಗರು ಎಚ್ಚರಿಕೆಯಿಂದ ಇರಬೇಕಾಗಿದೆ.
ಇನ್ನುಳಿದಂತೆ ಮಲೆನಾಡು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಕೂಡ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದೆ. ಹಲವೆಡೆ ಭೂಮಿ ತಂಪಾದರೆ, ಇನ್ನೂ ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಶನಿವಾರ ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ರಾಜ್ಯದಲ್ಲಿ ದಾಖಲಾಗಿದೆ.