ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮೂಲಕ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ತಗ್ಗು ಪ್ರದೇಶ, ನದಿ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು ಅಗತ್ಯ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.