ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ
ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಡ್ಯಾಂನಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂನ 29 ಕ್ರಸ್ಟ್ ಗೇಟ್ ಗಳನ್ನು ಮಾಡಿ ಮಾಡಿ ನೀರು ಬಿಡುಗಡೆ ಮಾಡಲಾಗಿದೆ.
ನದಿಗೆ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ಸದ್ಯ ಡ್ಯಾಂಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ನಷ್ಟು ಒಳಹರಿವು ಇದೆ. ಒಳ ಹರಿವಿನಷ್ಟೇ ನೀರನ್ನು ನದಿಗೆ ಬಿಡಲಾಗಿದೆ. 33.33 ಟಿಎಂಸಿ ಸಾಮರ್ಥ್ಯವಿರುವ ಡ್ಯಾಂನಲ್ಲಿ ಸದ್ಯ 26.74 ಟಿಎಂಸಿ ನೀರು ಸಂಗ್ರಹವಿದೆ.