ಬೆಂಗಳೂರು: ನಗರದಲ್ಲಿ ವಿವಾಹಿತ ಮಹಿಳೆಯ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ.
ನಗರದ ಹೆಮ್ಮಿಗೆಪುರದ ಗಾಣಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಭಾಗ್ಯ ಕೊಲೆಯಾಗಿರುವ ವಿವಾಹಿತ ಮಹಿಳೆಯಾಗಿದ್ದಾರೆ. ಪತಿಯಿಂದಲೇ ಭಾಗ್ಯ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹವೇ ಕೊಲೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.