ಬೆಂಗಳೂರು : ಬೆಳಗಾವಿಯ ಸುರ್ವಣಸೌಧದಲ್ಲಿ ಡಿಸೆಂಬರ್ 8ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಹೇಳೀದ್ದಾರೆ.
ಮೇಕೆದಾಟು ಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವರು, “ಮೇಕೆದಾಟು ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟದ ಹಿನ್ನೆಲೆಯಲ್ಲಿ ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಜಾ ಆಗಿದೆ. ಹೀಗಾಗಿ ಯೋಜನೆಗೆ ಮುಂದಿನ ಹೆಜ್ಜೆ ಇಡಲು ಹಸಿರು ನಿಶಾನೆ ಸಿಕ್ಕಿದೆ. ಮೇಕೆ ದಾಟು ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಕ್ಯಾಬಿನೆಟ್ ಅಭಿನಂದನೆ ಸಲ್ಲಿಸಿದೆ” ಎಂದರು.
ಇದನ್ನೂ ಓದಿ : ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್ ನೋಡುವುದೇಗೆ?



















