ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ.
ಮಕ್ಕಳು ಅಳುತ್ತಿದ್ದರಿಂದ ಚಾಕೋಲೇಟ್, ಬಿಸ್ಕೆಟ್ ತರಲು ಮಹಿಳೆ ಅಂಗಡಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮಹಿಳೆ ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಲಸುಲಿಗೆ ಗ್ರಾಮದ ಗುಲಾಬಿ ಸಾವನ್ನಪ್ಪಿರುವ ಮಹಿಳೆ ಎನ್ನಲಾಗಿದೆ. ಕಾರು ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕ ಕಾರು ನಿಲ್ಲಿಸದೆ ಅಮಾನವೀಯತೆ ತೋರಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ. KA-05-AH-0576 ನಂಬರಿನ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.