ಕೋಲಾರ: ಮಹಿಳೆಯನ್ನು ಹಿಂಬಾಲಿಸಿ ಬಂದ ಖದೀಮರು ಸರಗಳ್ಳತನಕ್ಕೆ ಯತ್ನಿಸಿ, ನಕಲಿ ಸರ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಮುಳಬಾಗಿಲು ನಗರದ ಸಂಜಪ್ಪ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಸ್ಕೂಟರ್ ನಿಲ್ಲಿಸುತ್ತಿದ್ದಂತೆ ಹಿಂಬಾಲಿಸಿಕೊಂಡು ಬಂದಿದ್ದ ಖದೀಮರು, ಮಹಿಳೆಯನ್ನು ಅಟ್ಟಾಡಿಸಿ ಮೇಲೆ ಬಿದ್ದು ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಕೊನೆಗೆ ಮಹಿಳೆಯ ಕೊರಳಿನಲ್ಲಿದ್ದ ನಕಲಿ ಸರ ಕಸಿದುಕೊಂಡು ಖದೀಮರು ಪರಾರಿಯಾಗಿದ್ದಾರೆ.
ಸರಗಳ್ಳತನದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.