ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಹತ್ಯೆ ಮಾಡಿ ಕಸದ ಲಾರಿಯಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ.
ಮಹಿಳೆಯನ್ನು ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಚನ್ನಮ್ಮನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಈ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಆಟೋದಲ್ಲಿ ಬಂದು ಮಹಿಳೆಯ ಡೆಡ್ ಬಾಡಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಹೋಗಿದ್ದಾರೆ. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
30 ರಿಂದ 35 ವರ್ಷ ಆಸುಪಾಸಿನ ಮಹಿಳೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ. ಸದ್ಯ ಈ ಕುರಿತು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಂತಕರಿಗಾಗಿ ಹುಡುಕಾಟ ನಡೆಸಿದ್ದಾರೆ.