ಕಾರ್ಮಿಕರ ಮಹಾ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಕಾರ್ಮಿಕ ಬಂಧುಗಳಿಗಾಗಿ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡುವ ಕಾರ್ಯಕ್ರಮ ಮೇ 24ರಂದು ಸಂಜೆ 6ಕ್ಕೆ ಬೆಂಗಳೂರಿನ ನಾಗಪ್ಪ ಬ್ಲಾಕ್ 4ನೇ ಅಡ್ಡ ರಸ್ತೆಯ 4ನೇ ಮುಖ್ಯ ರಸ್ತೆಯಲ್ಲಿ ನಡೆಯಲಿದೆ.
ಮಾಜಿ ಡಿಸಿಎಂ, ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಬೆಂಗಳೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಅತಿಥಿಗಳಾಗಿ ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್, ಶ್ರೀರಾಂಪುರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಪೂಣ್ಣಚ್ಚ, ಗಾಯತ್ರಿನಗರ ವಾರ್ಡ್ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಚಂದ್ರಕಲಾ ಗಿರೀಶ್ ಲಕ್ಕಣ್ಣ, ಸುಬ್ರಮಣ್ಯನಗರ ವಾರ್ಡ್ ನ ನಿಕಟಪೂರ್ವ ಬಿಬಿಎಂಪಿ ಸದಸ್ಯ ಮಂಜುನಾಥ್, ಕಾಂಗ್ರೆಸ್ ಮುಖಂಡ ಗಿರೀಶ್ ಲಕ್ಕಣ್ಣ, ಎಂಇಐ ಯೂನಿಯನ್ ಲೀಡರ್ ಮೋಹನ್ ರಾಮ್ ಆಗಮಿಸಲಿದ್ದಾರೆ ಎಂದು ರಾಜ್ಯಾಧ್ಯಕ್ಷ ವಸಂತಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.