ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ಧ ಎಂಎಲ್ಸಿ ಡಾ.ಯತೀಂದ್ರ ಕಿಡಿಕಾರಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಕಳೆದ ಎರಡು ತಿಂಗಳಲ್ಲಿ ಇಬ್ಬರು ಅಕ್ರಮಮದ್ಯ ಸೇವಿಸಿ ಬಲಿಯಾಗಿದ್ದಾರೆ.
ಹೀಗಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಬಳಿ ಮದ್ಯ ಮಾರಟ ನಿಲ್ಲಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಡಾ.ಯತೀಂದ್ರ ತರಾಟೆತೆಗದುಕೊಂಡಿದ್ದು, ತಕ್ಷಣ ನಿಲ್ಲಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.